ತೆಲಂಗಾಣದಲ್ಲಿ sslc ಪರೀಕ್ಷೆಗಳು ರದ್ದು

ಹೈದರಾಬಾದ್ : ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಕಳವಳಗೊಂಡಿರುವ ತೆಲಂಗಾಣದ ಮುಖ್ಯಮಂತ್ರಿ ಕೆ ಚಂದ್ರಶೇಖರರಾವ ಅವರು ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು 10 ನೇ ತರಗತಿಯ ಎಲ್ಲ ಪರೀಕ್ಷೆಗಳನ್ನು ರದ್ದು ಗೊಳಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ .

ಇಂಟರ್ನಲ ಅಂಕಗಳ ಆಧಾರದ ಮೇಲೆ ಗ್ರೇಡಗಳನ್ನೂ ನೀಡಿ ಮುಂದಿನ ತರಗತಿಗಳಿಗೆ ಬಡ್ತಿ ನೀಡಲಾಗುವುದು ಎಂದು ತಿಳಿಸಿದರು .

ದೇಶದಲ್ಲಿ ಲಾಕಡೌನ್ ಸಡಿಲಗೊಂಡ ಬಳಿಕ ಬಹುತೇಕ ರಾಜ್ಯಗಳಲ್ಲಿ ಪರೀಕ್ಷೆಗಳನ್ನು ರದ್ದುಪಡಿಸಬೇಕೆಂಬ ಕೂಗು ಕೇಳಿಬರುತ್ತಿದೆ. ರಾಜ್ಯದಲ್ಲೂ ಕೂಡ ಈಗಾಗಲೇ 1 ರಿಂದ 9 ನೇ ತರಗತಿಯ ಪರೀಕ್ಷೆಗಳನ್ನು ರದ್ದುಪಡಿಸಿ ಮುಂದಿನ ತರಗತಿಗಳಿಗೆ ಬಡ್ತಿ ನೀಡಲಾಗಿದೆ. ರಾಜ್ಯದಲ್ಲಿ ಈಗಾಗಲೇ ನಿಗದಿಪಡಿಸಿರುವಂತೆ 10ನೇ ತರಗತಿಗಳಿಗೆ ಇದೆ ಜೂನ್ 25 ರಿಂದ ಪರೀಕ್ಷೆಗಳು ನಡೆಯಲಿವೆ .

Leave a Reply

Your email address will not be published. Required fields are marked *